ಕಲಘಟಗಿ: ತಾಲ್ಲೂಕಿನ ಹುಣಸಿಕಟ್ಟಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ. ಕೊಲೆಯಾದ ವ್ಯಕ್ತಿ ಕುಂದಗೋಳ ತಾಲ್ಲೂಕಿನ ರಾಮನಕೊಪ್ಪ ಗ್ರಾಮದ ನಿವಾಸಿ ವಿಠ್ಠಲ ಬಸಪ್ಪ ಕುರಾಡೆ (30) ಎಂದು ಗುರುತಿಸಲಾಗಿದೆ.ದ್ಯಾವನಕೊಂಡ ಹುಣಸಿಕಟ್ಟಿ ಗ್ರಾಮದ ಮದ್ಯದ ರಸ್ತೆ ಪಕ್ಕದ ಬನ್ನಿ ಬಸವೇಶ್ವರ ದೇವಸ್ಥಾನದ ಎದುರುಗಡೆ ಯಾರೋ ದುಷ್ಕರ್ಮಿಗಳು ಕಬ್ಬಿಣದ ರಾಡ್‌ನಿಂದ ತಲೆ, ಮುಖ, ಕಾಲಿಗೆ ಹೊಡೆದು ಕೊಲೆ ಮಾಡಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಸಿಪಿಐ ಶ್ರೀಶೈಲ ಕೌಜಲಗಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ವ್ಯಕ್ತಿಯ ಮೃತ ದೇಹ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

