ಬೆಂಗಳೂರು: ಆಸ್ಪತ್ರೆಯಲ್ಲಿ ಮಹಿಳಾ ಸಹೋದ್ಯೋಗಿಗಳ ಖಾಸಗಿ ಫೋಟೋ, ವಿಡಿಯೋ ಚಿತ್ರೀಕರಿಸಿ ವಿಕೃತಿ ಮೆರೆಯುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ಪತ್ರೆಯಲ್ಲಿ ಲೇಡಿ ನರ್ಸ್ ಗಳು ಬಟ್ಟೆ ಬದಲಿಸುವ ವಿಡಿಯೋ ಚಿತ್ರೀಕರಿಸಿ ವಿಕೃತಿ ಮೆರೆಯುತ್ತಿದ್ದ ಬೆಂಗಳೂರಿನ ನಾಗರಭಾವಿ ಖಾಸಗಿ ಆಸ್ಪತ್ರೆಯ ನೌಕರ ಸುವೆಂದು ಮೊಹಂತಿ ಈ ಕೃತ್ಯವೆಸಗುತ್ತಿದ್ದ.ಇದನ್ನು ಗಮನಿಸಿದ ನರ್ಸ್, ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದರು. ವೈದ್ಯ ಚೇತನ್ ತಕ್ಷಣ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಕೆಲಸ ಮಾಡುತ್ತಿದ್ದ. ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸುವೆಂದು ಮೊಹಂತಿಯನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

