Breaking News

ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕ ರಫೀಕ್ ಸಾವು: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕ ಮಹಮ್ಮದ್ ರಫೀಕ್(42) ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿತ್ತು. ಅಪಘಾತದಲ್ಲಿ ಚಾಲಕ ಮಹಮ್ಮದ್ ರಫೀಕ್ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅವರನ್ನು ನಿನ್ನೆ ಮಧ್ಯಾಹ್ನ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ನಿನ್ನೆ ರಾತ್ರಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಮೃತಪಟ್ಟಿದ್ದಾರೆ. ಇದರೊಂದಿಗೆ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *