Breaking News

ಹಿರಿಯೂರಿನಲ್ಲಿ ಅಪಘಾತ: ಬಸ್ ಚಾಲಕನ ಸ್ಥಿತಿ ಗಂಭೀರ

ಹುಬ್ಬಳ್ಳಿ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಬಸ್ ಚಾಲಕ ಹಾಗೂ ಕ್ಲೀನರ್ ಅವರನ್ನು ಚಿಕಿತ್ಸೆಗಾಗಿ ಇಲ್ಲಿನ ಕೆಎಂಸಿ-ಆರ್‌ಐ ಆಸ್ಪತ್ರೆಗೆ ಗುರುವಾರ ದಾಖಲಿಸಲಾಗಿದೆ.ಚಾಲಕ ಮೊಹಮ್ಮದ್ ರಫೀಕ್ ಹುಲಗೂರ (35) ತೀವ್ರವಾಗಿ ಗಾಯಗೊಂಡಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಹುಬ್ಬಳ್ಳಿಯ ಬಿಡ್ನಾಳದ ನಿವಾಸಿ, ಕ್ಲೀನರ್ ಮೊಹಮ್ಮದ್‌ ಸಾಧಿಕ್ ಧಾರವಾಡ (19) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ‘ಅಪಘಾತದಲ್ಲಿ ಮೊಹಮ್ಮದ್ ರಫೀಕ್ ಕಾಲಿಗೆ ಬಲವಾದ ಪೆಟ್ಟು ಬಿದ್ದಿದ್ದು, ಬಹು ಅಂಗಾಂಗಳಿಗೆ ತೀವ್ರ ಗಾಯಗಳಾಗಿವೆ. ಇದರಿಂದ ಎದೆನೋವು, ಉಸಿರಾಟ ತೊಂದರೆ ಅನುಭವಿಸುತ್ತಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಕೆಎಂಸಿಆರ್‌ಐ ವೈದ್ಯಕೀಯ ಅಧೀಕ್ಷಕ ಡಾ.ಈಶ್ವರ ಹಸಬಿ ತಿಳಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *