Breaking News

ಶಿರಾ: ಮರಕ್ಕೆ ಡಿಕ್ಕಿ ಹೊಡೆದು ಕಾರಿಗೆ ಹೊತ್ತಿಕೊಂಡ ಬೆಂಕಿ‌: ವ್ಯಕ್ತಿ ಸಜೀವ ದಹನ

ಮುದ್ದರಂಗನಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದ ಶಿರಾ- ಅಮರಾಪುರ ರಸ್ತೆಯಲ್ಲಿ ಮಂಗಳವಾರ ರಾತ್ರಿ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡ ಪರಿಣಾಮ ಕಾರೊಂದು ಸಂಪೂರ್ಣವಾಗಿ ಸುಟ್ಟು ಹೋಗಿದೆ.ಕಾರಿನಲ್ಲಿದ್ದ ಹೊನ್ನಾಳಿಯ ಮಂಜುನಾಥ್ (25) ಸಜೀವ ದಹನವಾಗಿದ್ದಾರೆ.ಮೃತ ವ್ಯಕ್ತಿ ಚಾಲಕನ ಸೀಟು ಬಿಟ್ಟು ಹಿಂದಿನ ಸೀಟಿನಲ್ಲಿ ಕುಳಿತಿದ್ದುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾರಿನಲ್ಲಿ ಮತ್ತೊಬ್ಬರು ಪ್ರಯಾಣಿಸುತ್ತಿದ್ದರೆ ಎಂಬ ಅನುಮಾನ ಮೂಡಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶೋಕ್ ಕೆ.ವಿ, ಡಿವೈಎಸ್‌ಪಿ ಶೇಖರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಟ್ಟನಾಯಕನಹಳ್ಳಿ ಠಾಣೆ ಪೊಲೀಸರು ತನಿಖೆ‌ ಕೈಗೊಂಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *