Breaking News

ಬೆಂಗಳೂರಲ್ಲಿ ಮತ್ತೊಂದು ಭೀಕರ ಮರ್ಡರ್ : ಕತ್ತು ಕೊಯ್ದು ಜಯದೇವ ಆಸ್ಪತ್ರೆಯ ಸ್ಟಾಫ್ ನರ್ಸ್ ಹತ್ಯೆ!

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯಲ್ಲಿ ಈ ಒಂದು ಕೊಲೆ ನಡೆದಿದ್ದು, ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಡಿಸೆಂಬರ್ 24ರಂದು ರಾತ್ರಿ ಸ್ಟಾಫ್ ನರ್ಸ್ ಮಮತಾ ಕೊಲೆ ನಡೆದಿದೆ. ಆದರೆ ಡಿಸೆಂಬರ್ 25 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಕೊಲೆಯಾಗಿರುವ ಮಮತಾಗಿ ಮದುವೆ ಆಗಿರಲಿಲ್ಲ. ಜಯದೇವ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಮಮತಾ ಕೆಲಸ ಮಾಡುತ್ತಿದ್ದರು. ಸ್ನೇಹಿತೆಯ ಜೊತೆ ಮನೆ ಮಾಡಿಕೊಂಡು ಮತ ವಾಸವಿದ್ದಳು.ಡಿಸೆಂಬರ್ 24ರಂದು ಸ್ನೇಹಿತೆ ಊರಿಗೆ ತೆರಳಿದ್ದಾಳೆ. ಈ ವೇಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್‌ಐಆರ್ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *