ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದವರು ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಕ್ರಿಸ್‌ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇಳೆ ತೋಟಗೆರೆ ಟರ್ನಿಂಗ್ ನಲ್ಲಿ ಕಂಟ್ರೋಲ್ ಸಿಗದೆ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಸಾಪ್ಟ್ ವೇರ್ ಇಂಜಿನೀಯರ್ ಹರೀಶ್ (39) ಮತ್ತು ಅವರ ತಂದೆ ವೀರಭದ್ರ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆತಾಯಿ ಗೌರಮ್ಮ (62), ಹರೀಶ್ ಪತ್ನಿ ಮೈತ್ರಿ (32), ಮಗಳು ಸಿರಿ (10), ಚಿಕ್ಕಮ್ಮನ ಮಗಳು ವಂದನ (8) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತಪಟ್ಟವರನ್ನು ನೆಲಮಂಗಲ ಸರ್ಕಾರಿ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

