Breaking News

ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ: ಚಾಮರಾಜನಗರದಲ್ಲಿ 30ಕ್ಕೂ ಹೆಚ್ಚು ಮರಗಳನ್ನು ಕಡಿದಿರುವ ದುಷ್ಕರ್ಮಿಗಳು

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆಇಲ್ಲಿನ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಕೆಂಪಯ್ಯನಹಟ್ಟಿ, ರಾಮಾಪುರ, ದೊಮ್ಮನಗದ್ದೆ, ಪಳನಿಮೇಡು ಗ್ರಾಮದಳಲ್ಲಿ ಲೈಸನ್ಸ್ ಪಡೆಯದೇ ಅಕ್ರಮವಾಗಿ ಇಟ್ಟಿಗೆ ಫ್ಯಾಕ್ಟರಿಗಳು ತಲೆ ಎತ್ತಿದ್ದು, ಇಟ್ಟಿಗೆ ಬೇಯಿಸಲು ಮರಗಳನ್ನು ಕಡಿಯಲಾಗುತ್ತಿದೆ.ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದು ಮಲೆಮಹದೇಶ್ವರ ವನ್ಯಜೀವಿಧಾಮ ಭಾಗದ ವ್ಯಾಪ್ತಿಗೆ ಬರುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬಂದಿವೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *