ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಚಲಿಸುತ್ತಿದ್ದ ವೇಳೆಯಲ್ಲಿ ಕಾರ್ ನ ಟೈಯರ್ ಸ್ಪೋಟಗೊಂಡಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ.ಬೆಂಗಳೂರಿನ ರಾಜರಾಜೇಶ್ವರಿ ನಗರದ ಪ್ರೇಮಲತಾ ಶ್ರೀಧರ್(70) ಮೃತಪಟ್ಟವರು ಎಂದು ಹೇಳಲಾಗಿದೆ. ತೀರ್ಥಹಳ್ಳಿಯಿಂದ ಸಿಗಂದೂರು ದೇವಸ್ಥಾನಕ್ಕೆ ತೆರಳಿದ್ದ ಅವರು ಸಿಗಂದೂರಿನಿಂದ ತೀರ್ಥಹಳ್ಳಿಗೆ ವಾಪಸ್ ಹೋಗುವಾಗ ಗೊರಗೋಡು ಗ್ರಾಮದ ಬಳಿ ಕಾರ್ ಅಪಘಾತಕ್ಕೀಡಾಗಿದೆ. ಕಾರ್ ನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

