Breaking News

ಮುಂಬೈ: ಬಸ್‌ ಡಿಕ್ಕಿ ಹೊಡೆದು ನಾಲ್ವರ ಸಾವು, 9 ಜನರಿಗೆ ಗಂಭೀರ ಗಾಯ

ಮುಂಬೈ ಮಹಾನಗರ ಸಾರಿಗೆ ಸಂಸ್ಥೆಗೆ ಸೇರಿದ (ಬೆಸ್ಟ್‌) ಬಸ್ಸೊಂದು ಸೋಮವಾರ ರಾತ್ರಿ ಹಿಮ್ಮುಖವಾಗಿ ಚಲಿಸಿದ ವೇಳೆ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.‌’ಮುಂಬೈನ ಭಂಡಪ್‌ ಪ್ರದೇಶದ ಸ್ಟೇಷನ್‌ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಬಸ್‌ ಹಿಮ್ಮುಖವಾಗಿ ಚಲಿಸಿದ ವೇಳೆ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ.ಈ ವೇಳೆ ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಸ್‌ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಎಫ್‌ಐಆರ್‌ ದಾಖಲಿಸಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *