Breaking News

ದನದ ಮಾಂಸ ಸಾಗಾಟ, ಹಲ್ಲೆ ಪ್ರಕರಣ: ಬಂಧಿತರಿಗೆ ಪೋಕ್ಸೋ ಕುಣಿಕೆ

ಮಂಗಳೂರು: ಮಳಲಿ ನಾರ್ಲಪದವು ಬಳಿ ಅಕ್ರಮವಾಗಿ ಗೋ ಮಾಂಸ ಸಾಗಾಟ, ಹಲ್ಲೆ ಪ್ರಕರಣದಲ್ಲಿ ಬಂಧಿತ ಅರೋಪಿಗಳ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿ ಅಬ್ದುಲ್ ಸತ್ತಾರ್ ನ ಆರೋಪಿ ಜತೆಗಿದ್ದ 11 ವರ್ಷದ ಆತನ‌ ಪುತ್ರಿ ನೀಡಿದ‌ ಹೇಳಿಕೆ ಆಧಾರದಲ್ಲಿ‌ ಪ್ರಕರಣ ದಾಖಲಾಗಿದೆ.ಬೈಕನ್ನು ಟಾಟಾ ಸುಮೊ ವಾಹನದಲ್ಲಿ ಹಿಂಬಾಲಿಸಿದ್ದ ಆರೋಪಿಗಳು ನಾರ್ಲಪದವು ಬಳಿ ವಾಹನವನ್ನು ರಸ್ತೆಗೆ ಅಡ್ಡ ನಿಲ್ಲಿಸಿ, ತಂದೆ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ನನ್ನ ಬಟ್ಟೆಯನ್ನು ಜಗ್ಗಿ ಕಿರುಕುಳ ನೀಡಿದ್ದಾರೆ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ. ಬಜಪೆ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ತಲೆಮರೆಸಿಕೊಂಡಿದ್ದ ಮೂಲರಪಟ್ನದ ಅಬ್ದುಲ್ ಸತ್ತಾರ್ ನ್ನೂ ದಾಖಲೆಗಳಿಲ್ಲದೇ ಗೋಮಾಂಸ ಸಾಗಿಸಿದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *