Breaking News

ಆತೂರಿನಲ್ಲಿ ಟೆಂಪೋ ಢಿಕ್ಕಿ: ಕಾಸರಗೋಡಿನ ಶಿಕ್ಷಕ ಮೃತ್ಯು

ಕಡಬ: ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಆತೂರು ಎಂಬಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿ ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ (53) ಮೃತಪಟ್ಟವರು.ಸಂಬಂಧಿಕರ ಮದರಂಗಿ ಕಾರ್ಯಕ್ರಮಕ್ಕೆ ಮನೆಯವರ ಜೊತೆ ಬಂದಿದ್ದ ಅವರು ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ಬಸ್ಸಿನಿಂದ ಇಳಿದು, ಮನೆಯವರನ್ನು ರಿಕ್ಷಾದಲ್ಲಿ ಕಳುಹಿಸಿದ್ದರು. ಬಳಿಕ ನಡೆದುಕೊಂಡು ಮದರಂಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಗೂಡ್ಸ್ ಟೆಂಪೋವೊಂದು ಇವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದರು. ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *