ಹುಬ್ಬಳ್ಳಿ: ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಾಪ್ಪಿದ್ದ ಘಟನೆ ಮಂಗಳವಾರ ಬೆಳಿಗ್ಗೆ ಹುಬ್ಬಳ್ಳಿಯ ಅಂಚಟಗೇರಿ ಬಳಿ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ತಂದೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಬೈಕ್‌ನಲ್ಲಿ ಊರಿಗೆ ಹೊರಟಿದ್ದರು. ಇದೇ ವೇಳೆ, ವೇಗವಾಗಿ ಬಂದ ಕಾರವಾರ ಸಾರಿಗೆ ಬಸ್ ಚಾಲಕ ಓವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ಏಕಾಏಕಿ ಬೈಕ್‌ಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸಮೇತ ತಂದೆ ಮತ್ತು ಇಬ್ಬರು ಮಕ್ಕಳು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ದುರಂತದಲ್ಲಿ ತಂದೆ ಮತ್ತು ಒಬ್ಬ ಮಗು ಘಟನಾ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಇನ್ನೊಬ್ಬ ಮಗು ತೀವ್ರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕಿನಲ್ಲಿ ಎರಡು ಮಕ್ಕಳೊಂದಿಗೆ ತಂದೆ ತಡಸದತ್ತ ಹೊರಟಿದ್ದ ಎಂದು ಹೇಳಲಾಗುತ್ತೊದೆ. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

