Breaking News

ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ: ಗೆಳೆಯನನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಯುವಕ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ. ಭಗೀರಥ ಕೊಲೆಯಾದ ವ್ಯಕ್ತಿ. ದೀಪು ಮಂಡಲ್ ಸ್ನೇಹಿತನನ್ನೇ ಹೊಡೆದು ಕೊಂದ ಆರೋಪಿ.ಇಬ್ಬರೂ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಪಾರ್ಟಿ ಮಾಡಿದ್ದರು. ಎಣ್ಣೆ ಪಾರ್ಟಿ ವೇಳೆ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ವೇಳೆ ದೀಪು, ಸುತ್ತಿಗೆಯಿಂದ ಭಗೀರಥನನ್ನು ಹೊಡೆದು ಕೊಲೆಗೈದಿದ್ದಾನೆ. ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ದೀಪುನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *