Breaking News

ಶಿರಾ: ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ, ಮಗು ಶವ ಪತ್ತೆ

ಕಳ್ಳಂಬೆಳ್ಳ ಕೆರೆಯಲ್ಲಿ ಸೋಮವಾರ ತಾಯಿ ಮತ್ತು ಮಗನ ಶವ ಪತ್ತೆಯಾಗಿದೆ.ಮೃತರನ್ನು ತಾಲ್ಲೂಕಿನ ಭೂಪಸಂದ್ರ ಗ್ರಾಮದ ಹಂಸಲೇಖ (30) ಹಾಗೂ ಅವರ ಪುತ್ರ ಗುರುಪ್ರಸಾದ್ (10) ಎಂದು ಗುರ್ತಿಸಲಾಗಿದೆ. ಕಳ್ಳಂಬೆಳ್ಳ ಕೆರೆಯಲ್ಲಿ ಸೋಮವಾರ ಶವಗಳು ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ಬಿ.ಕೆ.ಶೇಖ‌ರ್, ಶಿರಾ ಗ್ರಾಮಾಂತರ ಸಿಪಿಐ ಶ್ರೀನಿವಾಸ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *