Breaking News

ಇನ್‌ಸ್ಪೆಕ್ಟರ್‌ಗಳ ಬಳಿ ₹5 ಲಕ್ಷ ಹಣಕ್ಕೆ ಬೇಡಿಕೆ: ಪತ್ರಕರ್ತ ಬಂಧನ

ಪೊಲೀಸ್ ಇನ್‌ಸ್ಪೆಕ್ಟರ್‌ಗಳಿಗೆ ವಾಟ್ಸ್‌ಆಯಪ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಪತ್ರಕರ್ತರೊಬ್ಬರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಬಾಗಲೂರು ಠಾಣೆ ಸಬ್ ಇನ್‌ಸ್ಪೆಕ್ಟರ್ ರಮೇಶ್ ಅವರ ದೂರು ಆಧರಿಸಿ ಪತ್ರಕರ್ತ ಶರತ್ ಶರ್ಮಾ ಕಲಗಾರ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಂಧಿಸಿದ್ದಾರೆ.ಆರೋಪಿಯು ಬಾಗಲೂರು ಠಾಣೆ ಇನ್‌ಸ್ಪೆಕ್ಟರ್‌ ಆಗಿದ್ದ ಶಬರೀಶ್ ಮತ್ತು ಸಬ್ ಇನ್‌ಸ್ಪೆಕ್ಟರ್‌ ರಮೇಶ್, ಕೊತ್ತನೂರು ಠಾಣೆ ಇನ್‌ಸ್ಪೆಕ್ಟರ್‌ ಆಗಿದ್ದ ಚೇತನ್ ಕುಮಾರ್ ಮತ್ತು ಅವಲಹಳ್ಳಿಯ ಠಾಣೆ ಇನ್‌ಸ್ಪೆಕ್ಟರ್‌ ಆಗಿದ್ದ ರಾಮಕೃಷ್ಣ ಅವರಿಗೆ ಕರೆ ಮಾಡಿ ತಲಾ ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *