Breaking News

ಢಿಕ್ಕಿ: ಮೂವರಿಗೆ ಗಾಯ

ಉಡುಪಿ: ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಹಾಗೂ ಸಹಸವಾರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಸ್ಕೃತ ಕಾಲೇಜು ಬಳಿ ನಡೆದಿದೆ.ಎ.ವಿ.ಶಾನುಭಾಗ್‌ ಎಂಬವರು ಕಾರನ್ನು ಅತೀ ವೇಗದಲ್ಲಿ ಚಲಾಯಿಸಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅದರ ಸವಾರ ರಿಚರ್ಡ್ ಡಿ”ಸೋಜಾ ಹಾಗೂ ಸಹಸವಾರ ರಸ್ತೆಗೆ ಬಿದ್ದು ಗಾಯಗೊಂಡರು.ಢಿಕ್ಕಿಯ ರಭಸಕ್ಕೆ ಅಲ್ಲಿಯೇ ಇದ್ದ ಇಮ್ತಿಯಾಜ್ ಅವರಿಗೂ ಸಣ್ಣಪುಟ್ಟ ಗಾಯವಾಗಿದ್ದು, ಸನಿಹದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಜಖಂಗೊಂಡಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ …

Leave a Reply

Your email address will not be published. Required fields are marked *