ಬೆಂಗಳೂರು: ಡ್ರಗ್ಸ್ ಕಾರ್ಖಾನೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಇನ್‌ಸ್ಪೆಕ್ಟರ್‌ಗಳಿಗೆ ವಾಟ್ಸ್‌ಆಯಪ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಬಾಗಲೂರು ಠಾಣೆಯ ಪೊಲೀಸರಿಂದ ಬಂಧನ ಕ್ಕೊಳಗಾಗಿರುವ ಪತ್ರಕರ್ತನನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ.ಪತ್ರಕರ್ತ ಶರತ್ ಶರ್ಮಾ ಕಲಗಾರು ಬಂಧಿತ. ಆರೋಪಿಯನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಪ್ರಕರಣದ ಸಂಬಂಧ ಆರೋಪಿಯನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

