Breaking News

ಚಿಕ್ಕಜಾಜೂರು | ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಈಚೆಗೆ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸಮೀಪದ ಸಾಸಲು ರೈಲು ನಿಲ್ದಾಣದ ಬಳಿ 55- 60 ವರ್ಷದ ಅಪರಿಚಿತ ವ್ಯಕ್ತಿಯ ಶವ ದೊರೆತಿದೆ. ಮೃತನು ಕಾವಿ ಬಟ್ಟೆ ಧರಿಸಿದ್ದು, ಮೇಲ್ನೋಟಕ್ಕೆ ಸನ್ಯಾಸಿಯಂತೆ ಕಂಡು ಬರುತ್ತಾನೆ. ದುಂಡು ಮುಖ, ಸಾಧಾರಣ ಮೈಕಟ್ಟು, ಬೋಳು ತಲೆ ಹೊಂದಿದ್ದಾನೆ.ಶವವನ್ನು ದಾವಣಗೆರೆ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ ಸಂಪರ್ಕಿಸಲು ಚಿಕ್ಕಜಾಜೂರು ರೈಲ್ವೆ ಪೊಲೀಸ್‌ ಉಪ ಠಾಣೆಯ ಪೊಲೀಸರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 94808 02123 ಅಥವಾ 08192 259643 ಸಂಪರ್ಕಿಸಬಹುದು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *