ಹುಬ್ಬಳ್ಳಿ: ಹೊಸ ವರ್ಷದ ಸಂಭ್ರಮಾಚರಣೆ ಮುಗಿದ ಕೆಲವೇ ಹೊತ್ತಿನಲ್ಲಿ ಯುವಕರ ನಡುವೆ ಭಾರೀ ಮಾರಾಮಾರಿ ನಡೆದ ಘಟನೆ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ವರದಿಯಾಗಿದೆ. ಖಾಸಗಿ ಹೋಟೆಲ್ ಎದುರು ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೆಲವೇ ಕ್ಷಣಗಳಲ್ಲಿ ಹೊಡೆದಾಟಕ್ಕೆ ತಿರುಗಿದೆ. ಪರಸ್ಪರ ಕೊರಳ ಪಟ್ಟಿ ಹಿಡಿದು ಯುವಕರು ಕೈಕಾಲು ಚಾಚಿಕೊಂಡಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಧ್ಯಪ್ರವೇಶಿಸಿ ಎರಡೂ ಗುಂಪುಗಳ ಜಗಳವನ್ನು ಶಮನಗೊಳಿಸಿದ್ದಾರೆ. ಯಾವುದೇ ಗಂಭೀರ ಗಾಯಗಳ ವರದಿ ಇಲ್ಲ. ಘಟನೆ ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

