Breaking News

KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ

ಬಾಗಲಕೋಟೆ : ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ.ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್​​ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *