Breaking News

ಬೆದರಿಸಿ ಮೊಬೈಲ್‌- ನಗದು ದರೋಡೆ

ಶಿವಮೊಗ್ಗ: ಬಾಡಿಗೆಗಾಗಿ ಕಾಯುತ್ತ ಲಾರಿಯಲ್ಲೇ ಮಲಗಿದ್ದ ಡ್ರೈವರ್, ಕ್ಲೀನರ್‌ಗೆ ಇಬ್ಬರು ದುಷ್ಕರ್ಮಿಗಳು ಲಾಂಗ್ ತೋರಿಸಿ, ಮೊಬೈಲ್ ಮತ್ತು ನಗದು ದರೋಡೆ ಮಾಡಿಕೊಂಡು ಹೋಗಿರುವ ಘಟನೆ ನಗರದ ಸಾಗರ ರಸ್ತೆಯಲ್ಲಿ ನಡೆದಿದೆ. ಮೈಸೂರು ಮೂಲದ ಲಾರಿ ಚಾಲಕ ಚಂದ್ರಶೇಖರ ಮತ್ತು ಕ್ಲೀನರ್ ಹಿತೇಶ್ ನಾಯಕ ಎಂಬವರನ್ನು ಬೆದರಿಸಲಾಗಿದೆ.ಇಬ್ಬರೂ ಬಾಡಿಗೆಗಾಗಿ ಕಾಯುತ್ತ ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಲಾರಿ ನಿಲ್ಲಿಸಿದ್ದರು. ಬೆಳಗಿನ ಜಾವ 4.30ರ ಹೊತ್ತಿಗೆ ಲಾರಿಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಲಾಂಗ್ ತೋರಿಸಿ ಬೆದರಿಸಿದ್ದಾರೆ. ಈ ವೇಳೆ ಚಾಲಕ ಚಂದ್ರಶೇಖರ್ ಅವರ ಕಾಲಿಗೆ ಲಾಂಗ್ ಉಲ್ಟಾ ಮಾಡಿಕೊಂಡು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಲಾರಿಯಲ್ಲಿದ್ದ ಬಾಡಿಗೆ ಹಣ ೨೦ ಸಾವಿರ ರೂ., ಕ್ಲೀನರ್ ಹಿತೇಶ್ ನಾಯಕ ಬಳಿ ಇದ್ದ ಮೊಬೈಲ್ ಫೋನ್ ಕಸಿದುಕೊಂಡು ದುಷ್ಕರ್ಮಿಗಳು ಬೈಕಿನಲ್ಲಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *