Breaking News

ರಾಜ್ಯದಲ್ಲಿ `ಬೆಚ್ಚಿ ಬೀಳಿಸುವ ಕೃತ್ಯ’ : ನಿಧಿಗಾಗಿ 8 ತಿಂಗಳ ಮಗುವಿನ ನರಬಲಿಗೆ ಯತ್ನ.!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲೆಬೆಲೆಯ ಜನತಾ ಕಾಲೋನಿಯಲ್ಲಿ ನಿಧಿಗಾಗಿ ಮನೆಯಲ್ಲಿ ಗುಂಡಿ ತೋಡಿ ಮಗು ಬಲಿಗಾಗಿ ಪೂಜೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ.ಈ ವೇಳೆ 8 ತಿಂಗಳ ಮಗುವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಸೈಯದ್ ಇಮ್ರಾನ್ ಎಂಬುವರ ಮನೆಯಲ್ಲಿ ನಿಧಿಗಾಗಿ ಮಗು ಬಲಿ ಪೂಜೆ ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಬೇರೆಯವರಿಂದ ಗಂಡು ಮಗುವನ್ನು ಖರೀದಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.ಹುಣ್ಣಿಮೆ ಹಿನ್ನೆಲೆ ಮಗು ಬಲಿ ಕೊಡುತ್ತಿದ್ದಾರೆಂದು ಅಪರಿಚಿತರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕರೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಮನೆಯನ್ನು ಪರಿಶೀಲಿಸಿದಾಗ ಮನೆಯ ಕೋಣೆಯಲ್ಲಿ ಗುಂಡಿ ತೆಗೆದು ಪೂಜೆ ಮಾಡಿದ್ದು ಪತ್ತೆಯಾಗಿದೆ. ಸದ್ಯ ಅಧಿಕಾರಿಗಳು ಮಗುವನ್ನು ಶಿಶುಕೇಂದ್ರಕ್ಕೆ ರವಾನಿಸಿ ತನಿಖೆ ಮಾಡುತ್ತಿದ್ದಾರೆ. ಸೂಲೆಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *