Breaking News

ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಡಿ ಗ್ರೂಪ್ ನೌಕರ

ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಡೆದಿದೆ.35 ವರ್ಷದ ಮೈಲಾರಲಿಂಗೇಶ್ವರ ಆತ್ಮಹತ್ಯೆಗೆ ಶರಣಾದ ನೌಕರ. ಆಯುಷ್ ಇಲಾಖೆ ನಡೆಸುತ್ತಿದ್ದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿಯೇ ಡಿ ಗ್ರೂಪ್ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮುದುರೆ ಗ್ರಾಮದ ನಿವಾಸಿಯಾಗಿದ್ದ ಮೈಲಾರಲಿಂಗ ಗದಗ ಜಿಲ್ಲೆಯ ಬೆಟಗೇರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಆಸ್ಪತ್ರೆಯಲ್ಲಿ ಜಗಳ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದೇ ಕೆಲಸದ ಒತ್ತಡವೂ ಇರಲಿಲ್ಲ. ಆಸ್ಪತ್ರೆಯ ಒಳಗಡೆ ಬಾಗಿಲು ಲಾಕ್ ಮಾಡಿಕೊಂಡಿದ್ದ ಮೈಲಾರಲಿಂಗ ಇಂದು ಸಾವಿಗೆ ಶರಣಾಗಿದ್ದಾನೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *