Breaking News

ರಕ್ತಚಂದನ ಸಾಗಣೆ ಮಾಡುತ್ತಿದ್ದ ಮೂವರ ಬಂಧನ

ಕೊಳ್ಳೇಗಾಲ:ತಾಲೂಕಿನ ಬೆಂಗಳೂರು ಹೆದ್ದಾರಿ ಮಾರ್ಗದ ಸತ್ತೇಗಾಲದಿಂದ ಶ್ರೀ ವೀರಭದ್ರಸ್ವಾಮಿ ದೇವಾಲಯಕ್ಕೆ ತೆರಳುವ ಜಂಕ್ಷನ್ ಬಳಿ ಶನಿವಾರ ಕಾರಿನಲ್ಲಿ ರಕ್ತಚಂದನ ಮರಗಳನ್ನು ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಐಡಿ ಅರಣ್ಯ ಸಂಚಾರ ದಳ ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರಿನ ನಿವಾಸಿಗಳಾದ ಜಯಚಂದ್ರ, ಸುಮಂತ್, ಕಾರು ಚಾಲಕ ಹರೀಶ್ ಬಂಧಿತರು. 85 ಕೆ.ಜಿ.ತೂಕದಷ್ಟು ರಕ್ತ ಚಂದನ ಮರಗಳನ್ನು ವಶಕ್ಕೆ ಪಡೆದಿದ್ದಾರೆ. ರಕ್ತಚಂದನ ಮರದ ತುಂಡುಗಳನ್ನು ಬೆಂಗಳೂರಿನಿಂದ ಕೇರಳಕ್ಕೆ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಐಡಿ ಅರಣ್ಯ ಸಂಚಾರ ದಳದ ಪಿಎಸ್‌ಐ ವಿಜಯರಾಜ್ ತಂಡ ತಾಲೂಕಿನ ಸತ್ತೇಗಾಲದಿಂದ ಶ್ರೀ ವೀರಭದ್ರಸ್ವಾಮಿ ದೇವಾಲಯಕ್ಕೆ ತೆರಳುವ ಜಂಕ್ಷನ್ ಬಳಿ ಕಾರನ್ನು ತಡೆದು ಪರಿಶೀಲಿಸಿ, ರಕ್ತ ಚಂದನ ಮರಗಳನ್ನು ವಶಕ್ಕೆ ಪಡೆದರು. ಮೂವರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *