Breaking News

ಮುಂಜಾನೆ ಮಂಜಿನ ಪರಿಣಾಮ ವ್ಯಾನ್‌ಗೆ ಕಾರು ಢಿಕ್ಕಿ; ಚಾಲಕನಿಗೆ ಗಾಯ

ಹಿರಿಯಡ್ಕದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪರ್ಕಳದ ಕೆನರಾ ಬ್ಯಾಂಕ್‌ ಸಮೀಪ ತಿರುವಿನಲ್ಲಿತೆಲಂಗಾಣ ಮೂಲದ ಅಯ್ಯಪ್ಪ ಮಾಲೆಧಾರಿಗಳು ಪ್ರಯಾಣಿಸುತ್ತಿದ್ದ ವ್ಯಾನ್‌ಗೆ ಢಿಕ್ಕಿ ಹೊಡೆದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ.ವ್ಯಾನ್ ಉಡುಪಿಯಿಂದ ಧರ್ಮಸ್ಥಳದ ಕಡೆಗೆ ಸಂಚರಿಸುತ್ತಿತ್ತು. ಪರ್ಕಳ ಪರಿಸರದಲ್ಲಿ ಬೆಳಗ್ಗಿನ ಜಾವ ಮಂಜು ಕವಿದ ವಾತಾವರಣವಿದ್ದು, ತಿರುವು ಗೋಚರಿಸದ ಕಾರಣ ಕಾರು ಬಲಬದಿಗೆ ಸಾಗಿ ಎದುರಿನಿಂದ ಬರುತ್ತಿದ್ದ ವ್ಯಾನ್‌ ಢಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕ ಗಾಯಗೊಂಡಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *