Breaking News

ಹುಬ್ಬಳ್ಳಿಯಲ್ಲಿ ವೈನ್ ಶಾಪ್ ಸಮೀಪ ಭಾರೀ ಅಗ್ನಿ ಅವಘಡ – ಪೆಟ್ ಸಾರಾಯಿ ಪ್ಯಾಕೆಟ್‌ಗಳಿಗೆ ಬೆಂಕಿ, ಕಾರುಗಳು ಭಸ್ಮ

ನಗರದ ಕಾರವಾರ ರಸ್ತೆಯಲ್ಲಿರುವ ಶೆಟ್ಟಿ ವೈನ್ ಶಾಪ್ ಸಮೀಪ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬಾರಿನಲ್ಲಿ ಬಳಸಿದ ಬಳಿಕ ಹಿಂಭಾಗದಲ್ಲಿ ಸಂಗ್ರಹಿಸಿಟ್ಟಿದ್ದ ಸಾರಾಯಿ ವೈನ್ ಪೆಟ್ ಪ್ಯಾಕೆಟ್‌ಗಳಿಗೆ ಏಕಾಏಕಿ ಬೆಂಕಿ ತಗುಲಿ ಹೊತ್ತಿ ಉರಿದಿದೆ.ಬೆಂಕಿಯ ತೀವ್ರತೆಯಿಂದ ಸಮೀಪದ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಹಲವು ಕಾರುಗಳಿಗೆ ಬೆಂಕಿ ವ್ಯಾಪಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾಗೂ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ.ಘಟನೆಯ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹರಸಾಹಸಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸಮಯಕ್ಕೆ ಸರಿಯಾಗಿ ಬೆಂಕಿ ನಂದಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.
ಈ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿಯಲು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *