ಬೀದರ್ ಜಿಲ್ಲೆ ಹುಮನಾಬಾದ್ನ ರಾಷ್ಟ್ರೀಯ ಹೆದ್ದಾರಿ ಮೇಲೆ ಅನಧಿಕೃತವಾಗಿ ಚೆಕ್ ಪೋಸ್ಟ್ ನಿರ್ಮಿಸಿ, ಗಂಟೆಗೆ 8ರಿಂದ 10 ಸಾವಿರ ರೂ. ಸಂಗ್ರಹಿಸುವ ಹಗಲು ದರೋಡೆ ದಂಧೆಯೂ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ವೇಳೆ ಬಹಿರಂಗವಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಸೂಚಿಸಿದರು.4 ಜಿಲ್ಲೆಗಳಲ್ಲಿ ಲೋಕಾಯುಕ್ತ ತಂಡ ನಿರಂತರ ಪರಿಶೀಲನೆ ನಡೆಸುತ್ತಿದ್ದು, ಸೋಮವಾರದ ತಪಾಸಣೆ ವೇಳೆ ರಾಷ್ಟ್ರೀಯ ಹೆದ್ದಾರಿ ಮೇಲೆ ಸರ್ಕಾರಿ ಅಲ್ಲದ, ವಾಹನವನ್ನು ನಿಲ್ಲಿಸಿ, ಅನಧಿಕೃತವಾಗಿ ಹಣ ಸಂಗ್ರಹಿಸುವುದು ಪತ್ತೆಯಾಗಿದೆ. ದೂರದಲ್ಲಿ ಆರ್ಟಿಒ, ಎಆರ್ಟಿಒ ಬರೆದಿರುವ ವಾಹನ ನಿಲ್ಲಿಸಿ, ಎಜೆಂಟ್ ಮೂಲಕ ಬಾಕ್ಸ್ನಲ್ಲಿ ಹಣ ಸಂಗ್ರಹಿಸಲಾಗುತ್ತದೆ. ಎರಡ್ಮೂರು ಗಂಟೆಗೊಮ್ಮೆ ಸರತಿಯಲ್ಲಿ ಬಾಕ್ಸ್ ಬದಲಾಯಿಸಿ, ಸರತಿಯಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕಿಡಿಯಾದರು.ಅಧಿಕೃತವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲೇ ರಾಬರಿ ನಡೆಸುತ್ತಿದ್ದು, ಪ್ರಕರಣ ದಾಖಲಿಸಲಾಗಿದೆ. ಗಮನಕ್ಕೆ ಬಂದ ತಕ್ಷಣ ಚೆಕ್ ಪೋಸ್ಟ್ ತೆರವು ಮಾಡಿದ್ದಾರೆ. ಆರ್ಟಿಒಗೆ ಕೇಳಿದರೆ ನಮ್ಮ ವ್ಯಾಪ್ತಿಗೆ ಬರಲ್ಲ ಎನ್ನುತ್ತಾರೆ. ಜಂಟಿ ಕಮೀಷನರ್ ಕರೆಸಿ, ವಿಚಾರಣೆ ನಡೆಸಿ, ಕ್ರಮ ಕೈಗೊಳ್ಳುತ್ತೇವೆ ಎಂದರು. ಅದೇ ರೀತಿ ಆಳಂದ ಬಳಿಯ ಚೆಕ್ ಪೋಸ್ಟ್ನಲ್ಲಿ ಅಕ್ರಮ ನಡೆಸಿರುವುದು ಪತ್ತೆಯಾಗಿದೆ ಎಂದು ತಿಳಿಸಿದರು.ಕಲಬುರಗಿ ಜಿಲ್ಲಾಧಿಕಾರಿ ಕಚೇರಿಗೆ ದಿಢೀರ್ ಭೇಟಿ ನೀಡಿದ ಲೋಕಾಯುಕ್ತ, ಅಧಿಕಾರಿಗಳು ಪರಿಶೀಲನೆ ನಡೆಸಿ, ಈ ವೇಳೆ 55 ಸೈನಿಕರಿಗೆ ಭೂಮಿ ಮಂಜೂರು ವಿಳಂಬ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಮಂಜೂರಿಗೆ ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

