Breaking News

ಅಮ್ಮ ಖರ್ಚಿಗೆ ಎರಡು ಲಕ್ಷ ಕೊಟ್ಟಿಲ್ಲ ಅಂತ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ಮಗ

ಈ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ನನ್ನಿವಾಳ ರಸ್ತೆಯಲ್ಲಿ ನಡೆದಿದೆ. 34 ವರ್ಷದ ಮಹೇಶ್ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.ಚಳ್ಳಕೆರೆಯ ಮಹೇಶ್ ತಾಯಿ ಗಂಗಮ್ಮ ಜಮೀನು ಮಾರಾಟ ಮಾಡಿದ್ದರು. ಕಳೆದ ವಾರ ಕಾರು ಖರೀದಿ ಮಾಡಬೇಕು ಅಂತ ಮಹೇಶ್,​ ತಾಯಿ ಗಂಗಮ್ಮ ಬಳಿ 4 ಲಕ್ಷ ರೂಪಾಯಿ ಹಣ ಪಡೆದಿದ್ದ. ಮತ್ತೆ 2 ಲಕ್ಷ ಹಣಕ್ಕೆ ಡಿಮ್ಯಾಂಡ್​​ ಮಾಡಿದ್ದ. ಆದ್ರೆ ಹಣ ಕೊಡಲು ವಿಳಂಬವಾಗಿದ್ರಿಂದ ಮಹೇಶ್​ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.
ಕೂಡಲೇ ಗಾಯಾಳನ್ನ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದ್ದು, ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಮಗನ ಪರಿಸ್ಥಿತಿ ನೆನೆದು ತಾಯಿ ಆಸ್ಪತ್ರೆ ಮುಂಭಾಗದಲ್ಲಿ ಕಣ್ಣೀರು ಹಾಕ್ತಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *