Breaking News

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ!

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ.ಡಿಕ್ಕಿಯಾದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *