Breaking News

ಅಕ್ರಮ ಜಾನುವಾರು ಸಾಗಾಟ,ಆರೋಪಿಗಳು ಪರಾರಿ

ಪುಂಜಾಲಕಟ್ಟೆ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಆರೋಪದಲ್ಲಿ ಇಬ್ಬರ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಿದ್ದಕಟ್ಟೆಯ ಕಿನ್ನಾಜೆ ನಿವಾಸಿಗಳಾದ ರಾಘವೇಂದ್ರ ನಾಯ್ಕ ಮತ್ತು ಯೋಗೀನಾಥ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.ಆರೋಪಿಗಳು ಪಿಕಪ್ ವಾಹನದಲ್ಲಿ3 ಗಂಡು ಕರು ಹಾಗೂ 1 ಹಸುವನ್ನು ಕರ್ಪೆದೋಟ – ನೆಕ್ಲಾಜೆ – ಕುಪ್ಪೆಪದವು ಮಾರ್ಗವಾಗಿ ಮಂಗಳೂರು ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಸ್ಥಳೀಯರು ನೀಡಿದ ಖಚಿತ ಮಾಹಿತಿಯನ್ವಯ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತಲುಪುವುದಕ್ಕೆ ಮುನ್ನವೇ ಜಾನುವಾರುಗಳನ್ನು ಪಿಕಪ್ ವಾಹನದಿಂದ ಕೆಳಗೆ ಇಳಿಸಿ ವಾಹನ ಸಹಿತ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ತತ್ ಕ್ಷಣ ಪಿಕಪನ್ನು ಹಿಂಬಾಲಿಸಿಕೊಂಡು ಹೋದರೂ ಆರೋಪಿಗಳ ಸಹಿತ ವಾಹನದ ಸುಳಿವು ಪತ್ತೆಯಾಗಿಲ್ಲ ಎನ್ನಲಾಗಿದೆ. ಈ ಬಗ್ಗೆ ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *