ಬೆಂಗಳೂರಲ್ಲಿ ಪ್ರೀತಿಯ ವಿಚಾರಕ್ಕೆ ಮನನೊಂದು ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ತೇಜಸ್ವಿನಿ (17) ಎನ್ನುವ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಯುವಕನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಯ ಮೃತದೇಹವನ್ನು ನೆಲಮಂಗಲದ ಆಸ್ಪತ್ರೆಗೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮೃತ ಬಾಲಕಿ ಪೋಷಕರು ಮಾದನಾಯಕನಹಳ್ಳಿ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಯುವಕನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ನೀಡಿದ್ದಾರೆ. ಪ್ರಕರಣದ ಕಲಿಸಿಕೊಂಡು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

