ವಿದ್ಯಾಕಾಶಿ ಧಾರವಾಡದಲ್ಲಿ ಹಾಡುಹಗಲೇ ನಡೆದ ಭೀಕರ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಕ್ತಸಂಬಂಧವನ್ನೇ ಮರೆತ ಅಣ್ಣನೊಬ್ಬ ತನ್ನ ಸ್ವಂತ ತಮ್ಮನನ್ನು ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಇರಿದ ಘಟನೆ ನಗರದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಸೂಫಿಯಾನ್ ಎಂಬಾತ ತನ್ನ ಸಹೋದರ ಮೊಹ್ಮದ್ ನದೀಂ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಇಬ್ಬರ ನಡುವೆ ನಡೆದ ಮಾತಿನ ಚಕಮಕಿ ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಸೂಫಿಯಾನ್ ಚಾಕುವಿನಿಂದ ನದೀಂಗೆ ಇರಿದಿದ್ದಾನೆ ಎಂದು ತಿಳಿದುಬಂದಿದೆ.
ತೀವ್ರ ರಕ್ತಸ್ರಾವಕ್ಕೊಳಗಾದ ಮೊಹ್ಮದ್ ನದೀಂನನ್ನು ತಕ್ಷಣ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ವೈದ್ಯರು ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ಕುಟುಂಬದೊಳಗಿನ ಆಸ್ತಿ ವಿಚಾರ ಅಥವಾ ವೈಯಕ್ತಿಕ ಕಲಹವೇ ಈ ಹಲ್ಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಆರೋಪಿ ಸೂಫಿಯಾನ್ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಹಗಲು ಹೊತ್ತಿನಲ್ಲೇ ನಡೆದ ಈ ರಕ್ತಪಾತ ಧಾರವಾಡ ನಗರದಲ್ಲಿ ಭೀತಿ ಹಾಗೂ ಆತಂಕದ ವಾತಾವರಣ ನಿರ್ಮಾಣ ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

