Breaking News

ಬಾಗಿಲಿಗೆ ನೀರು ಹಾಕುತ್ತಿದ್ದ ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಸಿದು ಪರಾರಿ: 24 ಗಂಟೆಗಳಲ್ಲೇ ಆರೋಪಿ ಅರೆಸ್ಟ್

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸೋಮವಾರ ಬೆಳಗ್ಗೆ ಮನೆ ಬಾಗಿಲಿಗೆ ನೀರು ಹಾಕುತ್ತಿದ್ದ ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಭದ್ರಾವತಿ ಪೊಲೀಸರು 24 ಗಂಟೆಗಳಲ್ಲಿ ಬಂಧಿಸಿದ್ದಾರೆ.ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕಡರನಾಯಕನಹಳ್ಳಿಯ ಹೊಸಪಾಳ್ಯ ಗ್ರಾಮದ ಬಿ.ಪ್ರತಾಪ್(25) ಬಂಧಿತ ಆರೋಪಿ. ಭದ್ರಾವತಿಯ ಜೆಡಿಕಟ್ಟೆಯ ಭಾಗ್ಯ(23) ಮನೆಯ ಬಳಿ ಬಾಗಿಲು ತೊಳೆಯಲು ಡ್ರಮ್ ನಿಂದ ನೀರು ತೆಗೆಯುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಆರೋಪಿ ಚಾಕು ತೋರಿಸಿ ಬೆದರಿಸಿದ್ದಾನೆ. ಚಾಕುವಿನಿಂದ ಇರಿಯುವುದಾಗಿ ಬೆದರಿಸಿ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾನೆ. ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಾಂಗಲ್ಯ ಸರ, ಚಾಕು ಹಾಗೂ ಬೈಕ್ ಸೇರಿ 1.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *