Breaking News

ಚಾಮರಾಜನಗರ| ಕೆಎಸ್‌ಆರ್‌ಟಿಸಿ ಬಸ್‌ – ಲಾರಿ ಮಧ್ಯೆ ಅಪಘಾತ: ಹಲವರಿಗೆ ಗಾಯ

ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿಯ ಬಳಿ ಮಂಗಳವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮೈಸೂರಿನಿಂದ ಚಾಮರಾಜನಗರದ ಕಡಗೆ ಬರುತ್ತಿದ್ದ ಅಶ್ವಮೇಧ ಬಸ್‌ ಹಾಗೂ ನಗರದಿಂದ ನಂಜನಗೂಡಿನ ಕಡೆಗೆ ತೆರಳುತ್ತಿದ್ದ ಲಾರಿ ಮಧ್ಯೆ ಬೆಂಡರವಾಡಿ ಗ್ರಾಮದ ತಿರುವೊಂದರಲ್ಲಿ ಅಪಘಾತವಾಗಿದೆಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದ್ದು ಲಾರಿ ಹಾಗೂ ಬಸ್‌ನ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಹೆಚ್ಚಿನವರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸೇರಿದವರು ಎನ್ನಲಾಗಿದ್ದು ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವಾದ ಹಿನ್ನೆಲೆಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳಕ್ಕೆ ತೆರಳಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *