Breaking News

ಹುಬ್ಬಳ್ಳಿಯಲ್ಲಿ ಪೊಲೀಸರ ಅಮಾನುಷ ಕೃತ್ಯ ಆರೋಪ! ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರಗೊಳಿಸಿ ಥಳಿಸಿದರಾ?

ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಬಿಜೆಪಿ ಕಾರ್ಯಕರ್ತೆ ಸುಜಾತಾ @ ವಿಜಯಲಕ್ಷ್ಮಿ ಹಂಡಿ ಅವರನ್ನು ಬಂಧನದ ವೇಳೆ ವಿವಸ್ತ್ರಗೊಳಿಸಿ ಥಳಿಸಲಾಗಿದೆ ಎಂಬ ಆರೋಪಗಳು ಪೊಲೀಸರ ವಿರುದ್ಧ ಕೇಳಿಬರುತ್ತಿವೆ.
ಈ ಘಟನೆಗೆ ಕಾಂಗ್ರೆಸ್ ಕಾರ್ಪೋರೆಟರ್ ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರೇ ಕಾರಣ ಎನ್ನಲಾಗಿದೆ.ಮತದಾರರ ಪಟ್ಟಿ ಪರಿಷ್ಕರಣೆ – SIR ಪ್ರಕ್ರಿಯೆ ವೇಳೆ ಕೇಶ್ವಾಪುರ ರಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿತ್ತು. ಆ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ತೆರಳಿದ್ದ ಸುಜಾತಾ ಹಂಡಿ ವಿರುದ್ಧ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.ಈ ದೂರು ಆಧರಿಸಿ ಬಂಧನಕ್ಕಿಳಿದ ಕೇಶ್ವಾಪುರ ಪೊಲೀಸರು, ಸುಜಾತಾ ಹಂಡಿ ಪ್ರತಿರೋಧ ತೋರಿದ ವೇಳೆ ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಗಂಭೀರ ಆರೋಪಗಳು ಇದೀಗ ಕೇಳಿಬರುತ್ತಿವೆ. ಇದಷ್ಟೇ ಅಲ್ಲದೆ, ಬಿಜೆಪಿ ಕಾರ್ಯಕರ್ತೆಯ ವಿರುದ್ಧ 307ರಡಿ ಪ್ರಕರಣವೂ ದಾಖಲಾಗಿದೆ.ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಸುಜಾತಾ ಹಂಡಿ ಇತ್ತೀಚಿನ ವರ್ಷಗಳಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
SIR–BLOಗಳ ಮೂಲಕ ಮತ ಡಿಲೀಟ್ ಮಾಡಿಸಿದ್ದಾರೆ ಎಂಬ ಆರೋಪವೇ ಈ ಗಲಾಟೆಗೆ ಮೂಲ ಎನ್ನಲಾಗುತ್ತಿದೆ. ಬಂಧನ ವೇಳೆ ಪೊಲೀಸರ ವಿರುದ್ಧ ಅನುಚಿತ ವರ್ತನೆ ತೋರಿದ್ದಾರೆ ಎಂಬ ಮತ್ತೊಂದು ದೂರು ಸಹ ಕೇಶ್ವಾಪುರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಒಟ್ಟಾರೆ, ಕಾನೂನು ಕಾಯುವವರೇ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪದಿಂದ ಹುಬ್ಬಳ್ಳಿಯಲ್ಲಿ ರಾಜಕೀಯ ವಲಯ ಕುದಿಯುತ್ತಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *