Breaking News

ಕೆಲಸ ಮುಗಿಸಿ ಮನೆಗೆ ಬಂದ ಪತಿಗೆ ಬಿಗ್ ಶಾಕ್: ನೀರಿನ ಸಂಪ್ ನಲ್ಲಿ ಪತ್ನಿ, ಇಬ್ಬರು ಮಕ್ಕಳ ಶವ ಪತ್ತೆ

ನೀರಿನ ಸಂಪ್ ನಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆಯಾಗಿವೆ. ತುಮಕೂರು ತಾಲೂಕಿನ ಸಿಂಗನಹಳ್ಳಿ ಕಾಲೋನಿಯಲ್ಲಿ ಘಟನೆ ನಡೆದಿದೆ.ನೀರಿನ ಸಂಪ್ ನಲ್ಲಿ 26 ವರ್ಷದ ವಿಜಯಲಕ್ಷ್ಮಿ, ಮಕ್ಕಳಾದ ಚೇತನ್(5), ಚೈತನ್ಯ(5) ಅವರ ಮೃತದೇಹ ಪತ್ತೆಯಾಗಿವೆ. ಫ್ಯಾಕ್ಟರಿಯೊಂದರಲ್ಲಿ ವಿಜಯಲಕ್ಷ್ಮಿ ಅವರ ಪ್ರತಿ ಕೆಲಸ ಮಾಡುತ್ತಿದ್ದಾರೆ.ಕೆಲಸ ಮುಗಿಸಿ ಪತಿ ಮನೆಗೆ ಬಂದಾಗ ಪತ್ನಿ, ಮಕ್ಕಳು ಇರಲಿಲ್ಲ. ಗಾಬರಿಯಾದ ಅವರು ಪತ್ನಿ ಹಾಗೂ ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದಾರೆ. ಮನೆಯ ಹೊರಗಡೆಯ ಸಂಪ್ ನಲ್ಲಿ ಶವಗಳು ಪತ್ತೆಯಾಗಿವೆ. ನೀರಿನ ಸಂಪ್ ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಜಯಲಕ್ಷ್ಮಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *