ಹುಬ್ಬಳ್ಳಿ: ನಗರದ ಕೇಶ್ವಾಪುರ ಠಾಣೆಯ ಪೊಲೀಸರು ಅಮಾಯಕ ಮಹಿಳೆಯ ಮೇಲೆ ಥಳಿಸಿರುವುದು ಅಕ್ಷಮ್ಯ ಅಪರಾಧ. ಮಹಿಳೆಯನ್ನು ಅಸಭ್ಯವಾಗಿ ನಡೆಸಿಕೊಂಡ ರೀತಿ ನಾಚಿಕೆಗೇಡು. ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ತಮ್ಮ ದರ್ಪವನ್ನು ಪ್ರದರ್ಶಿಸಿರುವುದು ರಾಜ್ಯದಲ್ಲಿ ಮಹಿಳೆಯರು ಅಸುರಕ್ಷಿತರು ಹಾಗೂ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಲಾದ ಜೋಶಿ ಅವರು ಆರೋಪಿಸಿದ್ದಾರೆ.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹಾಳುಮಾಡಿರುವ ಕಾಂಗ್ರೆಸ್ ಸರ್ಕಾರ, ದಬ್ಬಾಳಿಕೆಯನ್ನು ನಡೆಸುತ್ತಿದೆ. ತುಘಲಕ್ ಸಾಮ್ರಾಜ್ಯವನ್ನು ಮರುಸ್ಥಾಪಿಸುತ್ತಿದೆ. ಇಂದಿನ ಈ ಘಟನೆ ತೀರ ಖಂಡನೀಯ, ಕಣ್ಣು ಮುಚ್ಚಿ ಕುಳಿತಿರುವ ಗೃಹ ಸಚಿವರ ಆಡಳಿತ, ಕುರ್ಚಿ ಕಿತ್ತಾಟದಲ್ಲಿ ಮುಳುಗಿರುವ ಸಿಎಂ- ಡಿಸಿಎಂ ನಾಟಕದಿಂದ ರಾಜ್ಯದ ಜನ ಭಯದ ವಾತಾವರಣದಲ್ಲಿ ಬದುಕುವ ದುಸ್ಥಿತಿಯಲ್ಲಿದ್ದಾರೆ.ಈ ಘಟನೆಗೆ ಕಾರಣರಾದ ಪೊಲೀಸರ ವಿರುದ್ಧ ಹಾಗೂ ಈ ಪಿತೂರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೂಡಲೇ ಜರುಗಿಸಬೇಕು ಎಂದೂ ಸಚಿವ ಜೋಶಿ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

