Breaking News

ಬಿಜೆಪಿ ಕಾರ್ಯಕರ್ತೆಯ ಮೇಲಿನ ದೌರ್ಜನ್ಯ ಪ್ರಕರಣದ ನಡುವೆಯೇ ಶಾಸಕಿ ಭಾಗೀರಥಿ ಮುರುಳ್ಯರ ನಕಲಿ ಶ್ರದ್ಧಾಂಜಲಿ ಪೋಸ್ಟ್ ವೈರಲ್ – ಆರೋಪಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರ ನಕಲಿ ಶ್ರದ್ಧಾಂಜಲಿ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಬಿಲ್ಲವ ಸಂದೇಶ್’ ಎಂಬ ಫೇಸ್‌ಬುಕ್ ಖಾತೆಯಿಂದ ಈ ಅವಹೇಳನಕಾರಿ ಶ್ರದ್ಧಾಂಜಲಿ ಪೋಸ್ಟ್ ಹಾಕಲಾಗಿದ್ದು, ಅದರಲ್ಲಿ ದಲಿತ ಸಮುದಾಯ ಮತ್ತು ಶಾಸಕಿ ಭಾಗೀರಥಿ ಮುರುಳ್ಯರ ಬಗ್ಗೆ ತಪ್ಪು ಹಾಗೂ ಅವಮಾನಕಾರಿ ಬರಹವನ್ನು ಉಲ್ಲೇಖಿಸಲಾಗಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ನಕಲಿ ಪೋಸ್ಟ್ ಹರಿಬಿಟ್ಟಿದ್ದ ಆರೋಪಿ ಸಂದೇಶ್ ಅಲಿಯಾಸ್ ಸೀತಾರಾಮ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 352 ಹಾಗೂ ಬಿಎಸ್‌ಎಸ್ ಅಡಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ ಬಂದವರು ಹಾಗೂ ಜನಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಅವರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದು ತೀವ್ರ ಖಂಡನೀಯ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸುಳ್ಳು ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಇದೀಗ ಹೆಚ್ಚುತ್ತಿದೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *