Breaking News

ಹುಬ್ಬಳ್ಳಿ ವಿವಸ್ತ್ರ ಪ್ರಕರಣ: ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎತ್ತಂಗಡಿ..

ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ… ವಿವಸ್ತ್ರ ಪ್ರಕರಣಕ್ಕೆ ಎಸಿಪಿ ಮಟ್ಟದ ತನಿಖೆ…

ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ, ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖೆ ಕಠಿಣ ಕ್ರಮಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಸಂಬಂಧಿಸಿದ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಕೆ. ಹಟ್ಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎತ್ತಂಗಡಿ ಮಾಡಲಾಗಿದೆ.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಆದೇಶದಂತೆ, ಎಸ್.ಕೆ. ಹಟ್ಟಿಗೆ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದೇ ವೇಳೆ, ಕೇಶ್ವಾಪುರ ಪೊಲೀಸ್ ಠಾಣೆಯ ಪ್ರಭಾರಿಯಾಗಿ ಘಂಟಿಕೇರಿ ಪೊಲೀಸ್ ಇನ್ಸ್ಪೆಕ್ಟರ್ ಜಾಧವ್ ಅವರನ್ನು ನೇಮಕ ಮಾಡಲಾಗಿದೆ.ಇನ್ನು, ಸುಜಾತ ಹಂಡಿ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆಗೆ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಮಟ್ಟದ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ತನಿಖಾಧಿಕಾರಿಯಾಗಿ ಎಸಿಪಿ ಶಿವರಾಜ್ ಕಟಕಬಾವಿ ಅವರನ್ನು ನಿಯೋಜಿಸಲಾಗಿದೆ.ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *