Breaking News

ರಾಜ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ.!

ತುಮಕೂರು : ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾದ ಘಟನೆ ತುಮಕೂರು ಬಳಿ ನಡೆದಿದೆ. ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ.ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಂತಿದ್ದ ಲಾರಿಗೆ ವೇಗವಾಗಿ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *