Breaking News

ನಾಡಬಾಂಬ್ ಸ್ಫೋಟಗೊಂಡು ಹಸು ಸಾವು: ಮೂವರು ಆರೋಪಿಗಳು ಅರೆಸ್ಟ್

ರಾಮನಗರ: ಕಾಡುಹಂದಿ ಬೇಟೆಗಾಗಿ ಇಟ್ಟಿದ್ದ ನಾಡಬಾಂಬ್ ಸ್ಫೋತಗೊಂಡು ಹಸುವಿನ ಬಾಯಿ ಛಿದ್ರಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.ಕೃಷ್ಣಮೂರ್ತಿ, ಶಿವಕುಮಾರ್, ಶಿವನಪ್ಪ ಬಂಧಿತ ಆರೋಪಿಗಳು.ಈ ಮೂವರು ಕಾಡುಹಂದಿ ಬೇಟೆಗಾಗಿ ನಾಡಬಾಂಬ್ ಇಟ್ಟಿದ್ದರು.ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಆಲನಾಥ ಗ್ರಾಮದ ಬಳಿ ಜನವರಿ ೩ರಂದು ರೈತ ಶಿವನಗೌಡ ಎಂಬುವವರು ತಮ್ಮ ಹಸುವನ್ನು ಮೇಯಿಸಲು ಬಿಟ್ಟಿದ್ದಾಗ ನಾಡಬಾಂಬ್ ಸ್ಫೊಟಗೊಂಡು ಹಸುವಿನ ಬಾಯಿ ಛಿದ್ರಗೊಂಡಿತ್ತು. ಕಿಡಿಗೇಡಿಗಳ ಕೃತ್ಯಕ್ಕೆ ಹಸು ಎರಡು ದಿನಗಳ ಕಾಲ ಜೀವನ್ಮರಣದ ನಡುವೆ ಹೋರಾಡಿ ಮೃತಪಟ್ಟಿತ್ತು. ಈ ಬಗ್ಗೆ ರೈತ ಶಿವನಗೌಡ ಕೋಡಿಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *