Breaking News

ಚಿತ್ರದುರ್ಗ: ಲಾರಿಗೆ ಕಾರು ಡಿಕ್ಕಿ; ಡಿವೈಎಸ್‌ಪಿ ತಾಯಿ ಸೇರಿ ಇಬ್ಬರು ದುರ್ಮರಣ

ಇಲ್ಲಿನ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಡಿವೈಎಸ್‌ಪಿ ವೈಷ್ಣವಿ ಅವರ ತಾಯಿ ಕಮಲ ಹರಿಬಾಬು (69) ಹಾಗೂ ಕಾರು ಚಾಲಕ ರಾಕೇಶ್ (40) ಎಂದು ಗುರುತಿಸಲಾಗಿದೆ.ಮಹಾರಾಷ್ಟ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಗಾಯಗೊಂಡ ಡಿವೈಎಸ್‌ಪಿ ವೈಷ್ಣವಿ ಅವರು ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದು, ಉಳಿದ ಮೂವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *