Breaking News

ಬೆಳಗಾವಿಯಲ್ಲಿ ಮಕ್ಕಳ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ!

ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನೇ ಗಾಂಜಾ ಘಮಲೇರಿಸಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳ ವೈದ್ಯರಾಗಿರುವ ಡಾ.ರಾಹುಲ್ ವಿಠಲ ಬಂಟಿ ಅವರ ಮನೆಯಲ್ಲಿ ಗಾಂಜಾ ದೊರೆತಿದೆಈ ಕುರಿತು ಖಚಿತ ಮಾಹಿತಿ ಮೇರೆಗೆ ಮಾಳಮಾರುತಿ ಠಾಣೆ ಪೊಲೀಸರು ಡಾ.ರಾಹುಲ್ ಬಂಟಿ ಅವರ ಶಿವಬಸವ ನಗರದ ಮನೆ ಮೇಲೆ ದಾಳಿ ಮಾಡಿದಾಗ 134 ಗ್ರಾಂ ಗಾಂಜಾ ಸಿಕ್ಕಿದೆ.ಅಷ್ಟೇ ಅಲ್ಲದೇ, ವೈದ್ಯ ಗಾಂಜಾ ಸೇವಿಸಿರುವ ವಿಚಾರವೂ ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. ಗಾಂಜಾ ಜಪ್ತಿ ಮಾಡಿಕೊಂಡಿರುವ ಮಾಳಮಾರುತಿ ಪೊಲೀಸರು ಡಾ.ರಾಹುಲ್ ಬಂಟಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನೋಟಿಸ್ ನೀಡಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *