Breaking News

ಮೊಳಕಾಲ್ಮುರು: ಕಾರು ಡಿಕ್ಕಿ- ಬೈಕ್‌ ಸವಾರ ಸಾವು

ಮೊಳಕಾಲ್ಮುರು: ತಾಲ್ಲೂಕಿನ ಕೆಳಗಳಹಟ್ಟಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾರೆ.ತಾಲ್ಲೂಕಿನ ರಾಂಪುರ ಗ್ರಾಮದ ಕೊರಚರಹಟ್ಟಿಯ ರಾಮಚಂದ್ರ (30) ಮೃತರು.ಅವರು ರಾಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪ್ತ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಾರು ಚಾಲಕನ ಅತಿವೇಗ ಘಟನೆಗೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಕಾರಿನ ಚಾಲಕ ಆಂಧ್ರಪ್ರದೇಶದ ಉರುವಕೊಂಡ ತಾಲ್ಲೂಕಿನ ಕೊನಕೊಂಡ ಗ್ರಾಮದ ಕುರುಬ ಹೇಮಚರಣ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಮೊಳಕಾಲ್ಮುರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ಮಹೇಶ್‌ ಹೊಸಪೇಟೆ ಮಾಹಿತಿ ನೀಡಿದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *