ಕೇರಳ ಜಿಲ್ಲೆಯ ಮೋನಿಪಳ್ಳಿ ಸಮೀಪದ ಎಂಸಿ ರಸ್ತೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತರನ್ನು ನೀಂದೂರು ನಿವಾಸಿಗಳಾದ ಸುರೇಶ್ (52), ಅವರ ಪತ್ನಿ ಅಂಬಿಲಿ (48) ಮತ್ತು ಅವರ ಮೊಮ್ಮಗ ಅರ್ಜಿತ್ (7) ಎಂದು ಗುರುತಿಸಲಾಗಿದೆ.ಮೃತರ ಕುಟುಂಬದವರು ಎರ್ನಾಕುಲಂ ಜಿಲ್ಲೆಯ ಸುಪ್ರಸಿದ್ಧ ತಿರುವೈರಾನಿಕುಲಂ ಮಹಾದೇವ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ತಮ್ಮ ಮನೆಗೆ ಮರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಮೂವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಸಂಬಂಧ ಕುರವಿಲಂಗಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

