Breaking News

ಬೈಕ್ ಅಪಘಾತ, ಸ್ಥಳದಲ್ಲೇ ಸವಾರ ಸಾವು

ಶಿವಮೊಗ್ಗ: ಸಾಗರ ತಾಲೂಕಿನ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟೆಕೊಪ್ಪ ಗ್ರಾಮದ ರಮೇಶ್ (55) ಮೃತರುರಮೇಶ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮಾಹಿತಿ ಫಲಕಕ್ಕೆ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನಂದಪುರ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮಾಹಿತಿ ಫಲಕ ಕೂಡ ಹಾನಿಗೀಡಾಗಿದೆ. ಆನಂದಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *