Breaking News

ಕನಕಗಿರಿ | ಬೈಕ್‌ಗೆ ಟಿಪ್ಪರ್ ಡಿಕ್ಕಿ; ಸವಾರ ಸಾವು

ಅಕ್ರಮವಾಗಿ ಮರಳು ತುಂಬಿಕೊಂಡು ಹೊರಟ್ಟಿದ್ದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ಮೃತ ವೈಕ್ತಿಯನ್ನು ನವಲಿ ಗ್ರಾಮದ ರುದ್ರಗೌಡ ದಳಪತಿ(60) ಎಂದು ಗುರುತಿಸಲಾಗಿದೆ. ಡಂಕನಕಲ್ ಗ್ರಾಮದಲ್ಲಿ ಚಿಕಿತ್ಸೆ ಪಡೆದುಕೊಂಡು ಮಗನ‌ ಜತೆಗೆ ಬೈಕ್ ಮೂಲಕ ನವಲಿಗೆ ಬರುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ.ಮರಳು ತುಂಬಿಕೊಂಡಿದ್ದ ಟಿಪ್ಪರ್ ಗಂಗಾವತಿ ಕಡೆಗೆ ಹೊರಟಿತ್ತು ಎನ್ನಲಾಗಿದೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *