ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು, ಇಂದು ಮತ್ತೋರ್ವ ಮಹಿಳೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೋಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ಕಾಫಿ ತೋಟಕ್ಕೆ ನುಗ್ಗಿದೆ.ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯನ್ನು ತುಳಿದು ಕೊಂದಿದೆ. 40 ವರ್ಷದ ಶೋಭಾ ಆನೆ ದಾಳಿಗೆ ಬಲಿಯಾದ ಮಹಿಳೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

