Breaking News

ಕಡಬ – ತಾಯಿ -ಮಗು ನಾಪತ್ತೆ

ಕಡಬ ತಾಲೂಕು ಕೊಯಿಲ ಗ್ರಾಮ ನಿವಾಸಿ ನೇಹಾ(26) ಮತ್ತು ಮಗ ಮಹಮ್ಮದ್ ನಿಹಾಲ್ (3.5) ಎಂಬವರು ಕಾಣೆಯಾಗಿರುವ ಬಗ್ಗೆ ಕಡಬ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ 3 ತಿಂಗಳ ಹಿಂದೆ ನೇಹಾರವರು ತನ್ನ ಗಂಡನೊಂದಿಗೆ ಕೆಲಸಕ್ಕೆಂದು ಬೆಂಗಳೂರಿಗೆ ಹೋಗಿರುತ್ತಾರೆ.ಡಿಸೆಂಬರ್ 25 ರಂದು ಗಂಡ ಊರಿಗೆ ಬಂದಿದ್ದು, ನೇಹಾ ತನ್ನ ಮಗುವಿನೊಂದಿಗೆ ಮನೆಗೂ ಬಾರದೇ, ದೂರವಾಣಿ ಕರೆಗೂ ಸಿಗದೇ ಕಾಣೆಯಾಗಿರುತ್ತಾರೆ. ಕಾಣೆಯಾದವರ ಚಹರೆ :
ನೇಹಾ: ಎತ್ತರ 152 ಸೆಂ ಮೀ , ಗೋಧಿ ಮೈ ಬಣ್ಣ , ಸಾಧಾರಣ ಶರೀರ ಹೊಂದಿರುತ್ತಾರೆ. ಚೂಡಿದಾರ ಧರಿಸಿರುತ್ತಾರೆ. ಕನ್ನಡ, ಉರ್ದು, ಬ್ಯಾರಿ ಭಾಷೆ ಮಾತನಾಡುತ್ತಾರೆ. ನಿಹಾಲ್: 3.5 ವರ್ಷ, ಸಪೂರ ಶರೀರ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಡಬ ಪೆೋಲೀಸ್ ಠಾಣೆ ಸಂಪರ್ಕಿಸುವಂತೆ ಪೆೋಲಿಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *